ಬೈಬಲ್ ಆಯ್ಕೆ
ಹಳೆಯ ಒಡಂಬಡಿಕೆಯಲ್ಲಿ
ಹೊಸ ಒಡಂಬಡಿಕೆ
ಕನ್ನಡ ಬೈಬಲ್ 1934

ಕೀರ್ತನೆಗಳು ೧೨೫

ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.

ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.

ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.

ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು.

ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

Kannada Bible 1934
Public Domain: 1934