ಬೈಬಲ್ ಆಯ್ಕೆ
ಹಳೆಯ ಒಡಂಬಡಿಕೆಯಲ್ಲಿ
ಹೊಸ ಒಡಂಬಡಿಕೆ
ಕನ್ನಡ ಬೈಬಲ್ 1934

ಯೆಜೆಕಿಯೇಲನ ೨೬

ದೇಶ ಭ್ರಷ್ಟರಾಗಿದ್ದ ಹನೊಐಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂತು. ಆತನು ಹೇಳಿದ್ದೇನೆಂದರೆ,

“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”

ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.”

ದೇವರು ಹೇಳಿದ್ದೇನೆಂದರೆ, “ಆ ಶತ್ರು ಸೈನಿಕರು ತೂರಿನ ಗೋಡೆಗಳನ್ನು ಕೆಡವಿ, ಅದರ ಬುರುಜುಗಳನ್ನು ಎಳೆದು ಹಾಕುವರು. ನಾನು ಅದರ ಫಲವತ್ತಾದ ಮಣ್ಣನ್ನು ಕೆರೆದುಹಾಕಿ, ಅದನ್ನು ಬರಿದಾದ ಘಂಡೆಯನ್ನಾಗಿ ಬಿಟ್ಟುಬಿಡುವೆನು.

ಬೆಸ್ತರು ತಮ್ಮ ಘಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಲೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ.

ಆಕೆಯ ಹೆಣ್ಣುಮಕ್ಕಳು (ಚಿಕ್ಕ ಪಟ್ಟಣಗಳು) ಯುದ್ಧದಲ್ಲಿ ಕೊಲ್ಲಲ್ಪಡುವರು. ನಾನು ಯೆಹೋವನೆಂದು ಆಗ ತಿಳಿಯುವರು.”

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.

ನೆಘೂಕದೆಐಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು.

ಅವನು ಮರದ ತೊಲೆಗಳನ್ನು ತಂದು ನಿನ್ನ ಗೋಡೆಗಳನ್ನು ಕೆಡವಿಬಿಡುವನು. ಗುದ್ದಲಿಗಳಿಂದ ನಿನ್ನ ಬುರುಜುಗಳನ್ನು ಕೆಡವಿಹಾಕುವನು.

೧೦

ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಾಹುತರ, ಚಕ್ಕಡಿಗಳ, ರಥಗಳ ಶಘ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.

೧೧

ಬಾಬಿಲೋನಿನ ರಾಜನು ಕುದುರೆಯ ಮೇಲೆ ಕುಳಿತುಕೊಂಡು ನಿನ್ನ ನಗರದೊಳಗೆ ಪ್ರವೇಶಮಾಡುವನು. ನಿನ್ನ ರಸ್ತೆಗಳ ಮೇಲೆ ಅವನ ಕುದುರೆಯ ಗೊರಸು ಶಘ್ದವೇರಿಸುವದು. ನಿನ್ನನ್ನು ತನ್ನ ಖಡ್ಗದಿಂದ ಸಂಹರಿಸುವನು. ನಿನ್ನ ನಗರದಲ್ಲಿನ ಉನ್ನತಸ್ತಂಭಗಳು ಕೆಡವಲ್ಪಡುವವು,

೧೨

ನೆಘೂಕದೆಐಚ್ಚರನ ಸೈನ್ಯವು ನಿನ್ನ ಐಶಬರ್ಯವನ್ನು ದೋಚಿಕೊಳ್ಳುವದು. ನೀನು ಮಾರಙೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.

೧೩

ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸಬರವನ್ನು ಜನರು ಇನೆಐಂದೂ ಕೇಳರು.

೧೪

ನಾನು ನಿನ್ನನ್ನು ಬರಿದಾದ ಘಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಘಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವೆ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು.

೧೫

ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಘ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು.

೧೬

ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಙೇಗನೇ ನಾಶವಾದೆ ಎಂದು ಕೇಳಿ ದಂಗುಘಡಿದಂತಾಗುವರು.

೧೭

ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಘಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದಿಬಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಘಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.

೧೮

ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.”‘

೧೯

ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು ಬರಿದಾದ ನಗರವಾಗಿರುವೆ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾಸಾಗರವು ನಿನ್ನನ್ನು ಮುಚ್ಚಿಬಿಡುವದು.

೨೦

ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಊಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.

೨೧

ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡುಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.

Kannada Bible 1934
Public Domain: 1934