A A A A A
ಬೈಬಲ್ ಒಂದು ವರ್ಷದಲ್ಲಿ
ಮಾರ್ಚ್ ೪

ಸಂಖ್ಯಾಕಾಂಡ ೫:೧-೩೧
೧. ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
೨. ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು.
೩. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
೪. ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.
೫. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
೬. ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
೭. ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
೮. ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
೯. ಇದಲ್ಲದೆ ಇಸ್ರಾಯೇಲ್‌ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
೧೦. ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.
೧೧. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
೧೨. ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
೧೩. ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,
೧೪. ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
೧೫. ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
೧೬. ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.
೧೭. ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.
೧೮. ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
೧೯. ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
೨೦. ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
೨೧. ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
೨೨. ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
೨೩. ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
೨೪. ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
೨೫. ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು.
೨೬. ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು.
೨೭. ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
೨೮. ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
೨೯. ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
೩೦. ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
೩೧. ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.

ಸಂಖ್ಯಾಕಾಂಡ ೬:೧-೨೭
೧. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
೨. ನೀನು ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
೩. ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
೪. ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
೫. ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.
೬. ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
೭. ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
೮. ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
೯. ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
೧೦. ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
೧೧. ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
೧೨. ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
೧೩. ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
೧೪. ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
೧೫. ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
೧೬. ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.
೧೭. ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
೧೮. ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
೧೯. ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
೨೦. ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
೨೧. ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
೨೨. ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
೨೩. ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
೨೪. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
೨೫. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.
೨೬. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
೨೭. ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.

ಕೀರ್ತನೆಗಳು ೩೦:೮-೧೨
೮. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
೯. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
೧೦. ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.
೧೧. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
೧೨. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

ಜ್ಞಾನೋಕ್ತಿಗಳು ೧೧:೧-೩
೧. ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
೨. ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
೩. ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.

ಮಾರ್ಕನು ೮:೨೨-೩೮
೨೨. ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
೨೩. ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
೨೪. ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
೨೫. ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
೨೬. ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
೨೭. ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
೨೮. ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
೨೯. ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
೩೦. ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
೩೧. ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
೩೨. ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
೩೩. ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
೩೪. ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
೩೫. ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
೩೬. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
೩೭. ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
೩೮. ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.