A A A A A
ಬೈಬಲ್ ಒಂದು ವರ್ಷದಲ್ಲಿ
ಏಪ್ರಿಲ್ ೧೯

ನ್ಯಾಯಸ್ಥಾಪಕರು ೩:೧-೩೧
೧. ಕಾನಾನ್‌ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
೨. ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್‌ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
೩. ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
೪. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
೫. ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
೬. ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
೭. ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
೮. ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
೯. ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
೧೦. ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
೧೧. ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
೧೨. ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
೧೩. ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
೧೪. ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
೧೫. ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
೧೬. ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
೧೭. ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
೧೮. ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
೧೯. ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
೨೦. ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
೨೧. ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
೨೨. ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
೨೩. ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
೨೪. ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
೨೫. ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
೨೬. ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
೨೭. ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
೨೮. ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
೨೯. ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
೩೦. ಹೀಗೆ ಆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
೩೧. ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.

ನ್ಯಾಯಸ್ಥಾಪಕರು ೪:೧-೨೪
೧. ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
೨. ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
೩. ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್‌ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
೪. ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
೫. ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
೬. ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.
೭. ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
೮. ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
೯. ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
೧೦. ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
೧೧. ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
೧೨. ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್‌ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
೧೩. ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್‌ ನದಿಗೆ ಬರಮಾಡಿ ದನು.
೧೪. ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.
೧೫. ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
೧೬. ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
೧೭. ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
೧೮. ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
೧೯. ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
೨೦. ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
೨೧. ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
೨೨. ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
೨೩. ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
೨೪. ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.

ಕೀರ್ತನೆಗಳು ೪೮:೯-೧೪
೯. ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
೧೦. ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
೧೧. ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
೧೨. ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
೧೩. ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
೧೪. ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.

ಜ್ಞಾನೋಕ್ತಿಗಳು ೧೪:೧೮-೧೯
೧೮. ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
೧೯. ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.

ಲೂಕನು ೧೪:೨೫-೩೫
೨೫. ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
೨೬. ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
೨೭. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
೨೮. ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
೨೯. ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
೩೦. ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
೩೧. ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
೩೨. ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
೩೩. ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
೩೪. ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
೩೫. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.