೧ |
ಯಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದು ದಿನ ಆ ನಾಡಿನ ಮಹಿಳೆಯರನ್ನು ನೋಡಲು ಹೊರಗೆ ಹೋಗಿ ಇದ್ದಳು. |
೨ |
ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು. |
೩ |
ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು. |
ಕನ್ನಡ ಬೈಬಲ್ (KNCL) 2016 |
|
೧ |
ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು. |
೨ |
ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು. |
೩ |
ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು. |
ಕನ್ನಡ ಬೈಬಲ್ 2016 |
|
೧ |
ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು. |
೨ |
ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು. |
೩ |
ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು. |
ಕನ್ನಡ ಬೈಬಲ್ 1934 |
|