೧೧ |
ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ. |
ಕನ್ನಡ ಬೈಬಲ್ (KNCL) 2016 |
|
೧೧ |
ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. |
ಕನ್ನಡ ಬೈಬಲ್ 2016 |
|
೧೧ |
ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ. |
ಕನ್ನಡ ಬೈಬಲ್ 1934 |
|