೧೪ |
ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು. |
ಕನ್ನಡ ಬೈಬಲ್ (KNCL) 2016 |
|
೧೪ |
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು. |
ಕನ್ನಡ ಬೈಬಲ್ 2016 |
|
೧೪ |
ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು. |
ಕನ್ನಡ ಬೈಬಲ್ 1934 |
|