೨೩ |
ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು. |
ಕನ್ನಡ ಬೈಬಲ್ (KNCL) 2016 |
|
೨೩ |
ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು. |
ಕನ್ನಡ ಬೈಬಲ್ 2016 |
|
೨೩ |
ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು. |
ಕನ್ನಡ ಬೈಬಲ್ 1934 |
|