೩೨ |
ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ. |
ಕನ್ನಡ ಬೈಬಲ್ (KNCL) 2016 |
|
೩೨ |
ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು. |
ಕನ್ನಡ ಬೈಬಲ್ 2016 |
|
೩೨ |
ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು. |
ಕನ್ನಡ ಬೈಬಲ್ 1934 |
|