೧ |
ಬರವು ಕಾನಾನಿನಲ್ಲಿ ಘೋರವಾಗಿತ್ತು. |
೨ |
ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು. |
೩ |
ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ. |
ಕನ್ನಡ ಬೈಬಲ್ (KNCL) 2016 |
|
೧ |
ದೇಶದಲ್ಲಿ ಬರವು ಘೋರವಾಗಿತ್ತು. |
೨ |
ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು. |
೩ |
ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ. |
ಕನ್ನಡ ಬೈಬಲ್ 2016 |
|
೧ |
ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು. |
೨ |
ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು. |
೩ |
ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ. |
ಕನ್ನಡ ಬೈಬಲ್ 1934 |
|