೧ |
ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು. |
೨ |
ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, \ಇಗೋ, ಸಿದ್ಧನಿದ್ದೇನೆ,” ಎಂದನು. |
೩ |
ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು; |
ಕನ್ನಡ ಬೈಬಲ್ (KNCL) 2016 |
|
೧ |
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು. |
೨ |
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು. |
೩ |
ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು. |
ಕನ್ನಡ ಬೈಬಲ್ 2016 |
|
೧ |
ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು. |
೨ |
ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು. |
೩ |
ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ. |
ಕನ್ನಡ ಬೈಬಲ್ 1934 |
|