೨೫ |
ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು. |
ಕನ್ನಡ ಬೈಬಲ್ (KNCL) 2016 |
|
೨೫ |
ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು. |
ಕನ್ನಡ ಬೈಬಲ್ 2016 |
|
೨೫ |
ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು. |
ಕನ್ನಡ ಬೈಬಲ್ 1934 |
|