೨೭ |
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು. |
ಕನ್ನಡ ಬೈಬಲ್ (KNCL) 2016 |
|
೨೭ |
ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು. |
ಕನ್ನಡ ಬೈಬಲ್ 2016 |
|
೨೭ |
ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು. |
ಕನ್ನಡ ಬೈಬಲ್ 1934 |
|