A A A A A
ಅರಸುಗಳು ೨ ೩
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
ಕನ್ನಡ ಬೈಬಲ್ (KNCL) 2016

ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
ಕನ್ನಡ ಬೈಬಲ್ 2016

ಯೋರಾವುನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.
ಕನ್ನಡ ಬೈಬಲ್ 1934