೨೯ |
ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು. |
ಕನ್ನಡ ಬೈಬಲ್ (KNCL) 2016 |
|
೨೯ |
ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು. |
ಕನ್ನಡ ಬೈಬಲ್ 2016 |
|
೨೯ |
ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು. |
ಕನ್ನಡ ಬೈಬಲ್ 1934 |
|