೧ |
ಅನಂತರ ಸರ್ವೇಶ್ವರ, ಮೋಶೆಗೆ ಹೇಳಿದ್ದೇನೆಂದರೆ: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು: ‘ಹಿಬ್ರಿಯರ ದೇವರಾದ ಸರ್ವೇಶ್ವರನು ತನ್ನನ್ನು ಆರಾಧಿಸಲು ತನ್ನ ಜನರಿಗೆ ನಿಮ್ಮಿಂದ ಹೋಗಲು ಅಪ್ಪಣೆಯಾಗಬೇಕೆಂದು ಹೇಳಿದ್ದರು. |
೨ |
ನೀನು ಅವರಿಗೆ ಅಪ್ಪಣೆಕೊಡದೆ ಇನ್ನೂ ಅವರನ್ನು ತಡೆದೆಯಾದರೆ, |
೩ |
ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ. |
ಕನ್ನಡ ಬೈಬಲ್ (KNCL) 2016 |
|
೧ |
ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು. |
೨ |
ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ |
೩ |
ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು. |
ಕನ್ನಡ ಬೈಬಲ್ 2016 |
|
೧ |
ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ. |
೨ |
ನೀನು ಅವರನ್ನು ಬಿಡದೆ ಇನ್ನೂ ತಡೆದರೆ, |
೩ |
ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾದಿಯಿಂದ ಸಾಯಿಸುವೆನು. |
ಕನ್ನಡ ಬೈಬಲ್ 1934 |
|