೨ |
ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು: “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು. |
ಕನ್ನಡ ಬೈಬಲ್ (KNCL) 2016 |
|
೨ |
ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. |
ಕನ್ನಡ ಬೈಬಲ್ 2016 |
|
೨ |
ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು. |
ಕನ್ನಡ ಬೈಬಲ್ 1934 |
|