೧ |
ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು. |
ಕನ್ನಡ ಬೈಬಲ್ (KNCL) 2016 |
|
೧ |
ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು. |
ಕನ್ನಡ ಬೈಬಲ್ 2016 |
|
೧ |
ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ”‘ ಎಂದು ಹೇಳಿದನು. |
ಕನ್ನಡ ಬೈಬಲ್ 1934 |
|