A A A A A
ಯೆಶಾಯನ ೩೮
ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.
ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು,
“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.
ಕನ್ನಡ ಬೈಬಲ್ (KNCL) 2016

ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--
ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
ಕನ್ನಡ ಬೈಬಲ್ 2016

ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ”‘ ಎಂದು ಹೇಳಿದನು.
ಹಿಜ್ಕೀಯನು ದೇವಾಲಯದ ಕಡೆಗಿರುವ ಗೋಡೆಯ ಕಡೆಗೆ ಮುಖ ಮಾಡಿ ದೇವರಿಗೆ,
“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
ಕನ್ನಡ ಬೈಬಲ್ 1934