೨ |
ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ. |
ಕನ್ನಡ ಬೈಬಲ್ (KNCL) 2016 |
|
೨ |
ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು. |
ಕನ್ನಡ ಬೈಬಲ್ 2016 |
|
೨ |
ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು. |
ಕನ್ನಡ ಬೈಬಲ್ 1934 |
|