೪ |
ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು. |
ಕನ್ನಡ ಬೈಬಲ್ (KNCL) 2016 |
|
೪ |
ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು. |
ಕನ್ನಡ ಬೈಬಲ್ 2016 |
|
೪ |
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಘಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ. |
ಕನ್ನಡ ಬೈಬಲ್ 1934 |
|