೧ |
ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು. |
೨ |
ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು. |
೩ |
ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ: |
ಕನ್ನಡ ಬೈಬಲ್ (KNCL) 2016 |
|
೧ |
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು. |
೨ |
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ-- |
೩ |
ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ. |
ಕನ್ನಡ ಬೈಬಲ್ 2016 |
|
೧ |
ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಘಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು. |
೨ |
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಘಹುದು. ನೆಘೂಕದೆಐಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಘಹುದು.” |
೩ |
ಆಗ ಯೆರೆಮೀಯನು ಪಷ್ಹೂರ ಮತ್ತು ಚೆಫನ್ಯರಿಗೆ ಹೀಗೆ ಉತ್ತರಕೊಟ್ಟನು: “ರಾಜನಾದ ಚಿದ್ಕೀಯನಿಗೆ ಹೇಳಿರಿ. |
ಕನ್ನಡ ಬೈಬಲ್ 1934 |
|