೧೮ |
“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ. |
ಕನ್ನಡ ಬೈಬಲ್ (KNCL) 2016 |
|
೧೮ |
ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ. |
ಕನ್ನಡ ಬೈಬಲ್ 2016 |
|
೧೮ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’ ಮೀಕ 3:12 |
ಕನ್ನಡ ಬೈಬಲ್ 1934 |
|