೧ |
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು; |
೨ |
“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ. |
೩ |
ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು. |
ಕನ್ನಡ ಬೈಬಲ್ (KNCL) 2016 |
|
೧ |
ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ |
೨ |
ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು. |
೩ |
ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು. |
ಕನ್ನಡ ಬೈಬಲ್ 2016 |
|
೧ |
ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಘಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. |
೨ |
ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ. |
೩ |
ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಘಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಘಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಙೇಕೆಂದು ಮಾಡಿದ ಯೋಚನೆಗಳನ್ನು ಘದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಙೇಕೆಂದು ನಾನು ಯೋಚಿಸುತ್ತಿದ್ದೇನೆ. |
ಕನ್ನಡ ಬೈಬಲ್ 1934 |
|