೨೦ |
ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು. |
ಕನ್ನಡ ಬೈಬಲ್ (KNCL) 2016 |
|
೨೦ |
ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು. |
ಕನ್ನಡ ಬೈಬಲ್ 2016 |
|
೨೦ |
ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು. |
ಕನ್ನಡ ಬೈಬಲ್ 1934 |
|