೧೩ |
ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು. |
ಕನ್ನಡ ಬೈಬಲ್ (KNCL) 2016 |
|
೧೩ |
ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು. |
ಕನ್ನಡ ಬೈಬಲ್ 2016 |
|
೧೩ |
“ಶೆಘ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಘಂದಿರುವಿಯಾ? ಬೆಳ್ಳಿಘಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಘಂದಿರುವೆಯಾ?”‘ ಎಂದು ವಿಚಾರಿಸುವರು. |
ಕನ್ನಡ ಬೈಬಲ್ 1934 |
|