೮ |
ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ. |
ಕನ್ನಡ ಬೈಬಲ್ (KNCL) 2016 |
|
೮ |
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. |
ಕನ್ನಡ ಬೈಬಲ್ 2016 |
|
೮ |
ಘಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು. |
ಕನ್ನಡ ಬೈಬಲ್ 1934 |
|