೨೫ |
ಆ ಕದಗಳಲ್ಲಿ, ಅಂದರೆ ಪರಿಶುದ್ಧ ಸ್ಥಳದ ಕದಗಳಲ್ಲಿ ಕೆರೂಬಿಗಳು ಹಾಗು ಖರ್ಜೂರ ವೃಕ್ಷಗಳು ಗೋಡೆಗಳಲ್ಲಿ ಚಿತ್ರಿತವಾಗಿದ್ದ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು. |
ಕನ್ನಡ ಬೈಬಲ್ (KNCL) 2016 |
|
೨೫ |
ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು. |
ಕನ್ನಡ ಬೈಬಲ್ 2016 |
|
೨೫ |
ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರಗಳನ್ನು ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ, ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು. |
ಕನ್ನಡ ಬೈಬಲ್ 1934 |
|