೧೦ |
ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರದಲ್ಲಿ ಅದರ ಉದ್ದವು ಹನ್ನೆರಡುವರೆ ಕಿಲೋಮೀಟರ್, ಪಶ್ಚಿಮದಲ್ಲಿ ಅಗಲವು ಐದು ಕಿಲೋಮೀಟರ್, ಪೂರ್ವದಲ್ಲಿ ಅಗಲವು ಐದು ಕಿಲೋಮೀಟರ್, ಉತ್ತರದಲ್ಲಿ ಉದ್ದವು ಹನ್ನೆರಡುವರೆ ಕಿಲೋಮೀಟರ್. ಅದರ ಮಧ್ಯೆ ಸರ್ವೇಶ್ವರನ ಪವಿತ್ರಾಲಯವಿರುವುದು. |
ಕನ್ನಡ ಬೈಬಲ್ (KNCL) 2016 |
|
೧೦ |
ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು. |
ಕನ್ನಡ ಬೈಬಲ್ 2016 |
|
೧೦ |
ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. “ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು. |
ಕನ್ನಡ ಬೈಬಲ್ 1934 |
|