೨೧ |
ಮೀಸಲಾದ ಪವಿತ್ರಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಮಿಕ್ಕ ಭೂಮಿ ರಾಜನ ಪಾಲಾಗಿರಲಿ; ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ರಾಜನದು; ಮೀಸಲಾದ ಪವಿತ್ರಕ್ಷೇತ್ರ ಹಾಗು ಪವಿತ್ರಾಲಯ ಅದರ ಎರಡು ಭಾಗಗಳ ಮಧ್ಯೆ ಇರುವುವು; |
ಕನ್ನಡ ಬೈಬಲ್ (KNCL) 2016 |
|
೨೧ |
ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು. |
ಕನ್ನಡ ಬೈಬಲ್ 2016 |
|
೨೧ |
“ಈ ವಿಶೇಷ ಭೂಪ್ರದೇಶದ ಒಂದು ಭಾಗವು ದೇಶಾಊಪತಿಗೆ ಸೇರಿದೆ. ಈ ಭೂಪ್ರದೇಶವು ಚೌಕವಾಗಿದೆ. ಇದರ ಉದ್ದ 25,000 ಮೊಳ. ಇದರ ಅಗಲ 25,000 ಮೊಳ. ಈ ವಿಶೇಷ ಪ್ರದೇಶದಲ್ಲಿ ಒಂದು ಭಾಗವು ಯಾಜಕರಿಗೂ ಒಂದು ಭಾಗವು ಲೇವಿಯರಿಗೂ ಒಂದು ಭಾಗವು ದೇವಾಲಯಕ್ಕೂ ಸೇರಿವೆ. ಈ ವಿಶೇಷ ಪ್ರದೇಶದ ಕೇಂದ್ರದಲ್ಲಿ ದೇವಾಲಯವಿರುತ್ತದೆ. ಉಳಿದ ಭಾಗವೆಲ್ಲಾ ದೇಶಾಊಪತಿಗೆ ಸೇರಿದೆ. ಬೆನ್ಯಾಮೀನನ ಭಾಗಕ್ಕೂ ಯೆಹೂದದ ಭಾಗಕ್ಕೂ ನಡುವೆ ಇರುವ ಭೂಮಿಯು ಅಊಪತಿಗೆ ಸೇರಿದೆ. (Verses 21-22) |
ಕನ್ನಡ ಬೈಬಲ್ 1934 |
|