೧ |
ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು; |
೨ |
ಅದರ ಪಾರ್ಶ್ವಗಳು ನಾಡಿನ ಪೂರ್ವಪಶ್ಚಿಮಗಳ ಎಲ್ಲೆಗಳ ತನಕ ಚಾಚಿಕೊಂಡಿರುವುವು. |
೩ |
ದಾನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು. |
ಕನ್ನಡ ಬೈಬಲ್ (KNCL) 2016 |
|
೧ |
ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್ನ ಒಂದು ಭಾಗವಾಗಿದೆ. |
೨ |
ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ. |
೩ |
ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ. |
ಕನ್ನಡ ಬೈಬಲ್ 2016 |
|
೧ |
“ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಙೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು. (Verses 1-7) |
೨ |
See verse 1 |
೩ |
See verse 1 |
ಕನ್ನಡ ಬೈಬಲ್ 1934 |
|