A A A A A
ಧರ್ಮೋಪದೇಷಕಾಂಡ ೨೨
“ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ನೆಲದ ಮೇಲಾಗಲಿ ಒಂದು ಹಕ್ಕಿಯ ಗೂಡನ್ನು ಕಂಡು ಅದರೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು ಅವುಗಳ ಮೇಲೆ ತಾಯಿ ಹೊದಗಿರುವುದನ್ನು ನೋಡಿದರೆ, ಮರಿಗಳನ್ನಾಗಲಿ ತಾಯಿಯನ್ನಾಗಲಿ ಹಿಡಿದುಕೊಳ್ಳಬಾರದು.
ಕನ್ನಡ ಬೈಬಲ್ (KNCL) 2016

ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;
ಕನ್ನಡ ಬೈಬಲ್ 2016

“ನೀವು ದಾರಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲಾಗಲಿ ಮರದಲ್ಲಿಯಾಗಲಿ ಗೂಡು ಕಟ್ಟಿಕೊಂಡು ಅದರೊಳಗೆ ತಾಯಿ ಪಕ್ಷಿಯು ತನ್ನ ಮೊಟ್ಟೆಗಳೊಂದಿಗೆ ಇಲ್ಲವೆ ಮರಿಗಳೊಂದಿಗೆ ಇರುವುದನ್ನು ಕಂಡಾಗ ನೀವು ಮರಿಗಳೊಂದಿಗೆ ತಾಯಿಪಕ್ಷಿಯನ್ನು ಹಿಡಿದು ಕೊಂಡೊಯ್ಯಬಾರದು.
ಕನ್ನಡ ಬೈಬಲ್ 1934