A A A A A
ನ್ಯಾಯಸ್ಥಾಪಕರು ೧೪
೧೮
ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.
ಕನ್ನಡ ಬೈಬಲ್ (KNCL) 2016

೧೮
ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
ಕನ್ನಡ ಬೈಬಲ್ 2016

೧೮
ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.
ಕನ್ನಡ ಬೈಬಲ್ 1934