೩ |
ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು. |
ಕನ್ನಡ ಬೈಬಲ್ (KNCL) 2016 |
|
೩ |
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು. |
ಕನ್ನಡ ಬೈಬಲ್ 2016 |
|
೩ |
ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯನ್ನೇ ಮದುವೆಯಾಗಬೇಕು. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು. |
ಕನ್ನಡ ಬೈಬಲ್ 1934 |
|