೧೯ |
‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು. |
ಕನ್ನಡ ಬೈಬಲ್ (KNCL) 2016 |
|
೧೯ |
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ? |
ಕನ್ನಡ ಬೈಬಲ್ 2016 |
|
೧೯ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?” |
ಕನ್ನಡ ಬೈಬಲ್ 1934 |
|