೨೦ |
ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು. |
ಕನ್ನಡ ಬೈಬಲ್ (KNCL) 2016 |
|
೨೦ |
ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು. |
ಕನ್ನಡ ಬೈಬಲ್ 2016 |
|
೨೦ |
ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದುಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.” |
ಕನ್ನಡ ಬೈಬಲ್ 1934 |
|