೧ |
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ. |
೨ |
ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ. |
೩ |
ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ. |
ಕನ್ನಡ ಬೈಬಲ್ (KNCL) 2016 |
|
೧ |
ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು. |
೨ |
ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ. |
೩ |
ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು; |
ಕನ್ನಡ ಬೈಬಲ್ 2016 |
|
೧ |
ಯೆಹೋವನು ಹೇಳುವುದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು. |
೨ |
“ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು. |
೩ |
ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು. |
ಕನ್ನಡ ಬೈಬಲ್ 1934 |
|