೧ |
ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ). |
೨ |
ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು. |
೩ |
ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು. |
ಕನ್ನಡ ಬೈಬಲ್ (KNCL) 2016 |
|
೧ |
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು. |
೨ |
ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು. |
೩ |
ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು. |
ಕನ್ನಡ ಬೈಬಲ್ 2016 |
|
೧ |
ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಇದರರ್ಥ: ‘ಕೊಳ್ಳೆಗೆ ಅವಸರ,’ ‘ಸೂರೆಗೆ ಆತುರ.’)” |
೨ |
ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ಆ ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು. |
೩ |
ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆಯನ್ನು ಕೂಡಲು, ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “ಆ ಮಗನಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂಬ ಹೆಸರನ್ನಿಡು. |
ಕನ್ನಡ ಬೈಬಲ್ 1934 |
|