೧ |
ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು: |
೨ |
“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ: |
೩ |
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ, |
ಕನ್ನಡ ಬೈಬಲ್ (KNCL) 2016 |
|
೧ |
ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ-- |
೨ |
ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು |
೩ |
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ. |
ಕನ್ನಡ ಬೈಬಲ್ 2016 |
|
೧ |
ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ, |
೨ |
“ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಮುಖ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು. |
೩ |
ಅವನಿಗೆ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶದ ಅತ್ಯಂತ ಪ್ರಮುಖ ನಾಯಕನಾಗಿರುವೆ. |
ಕನ್ನಡ ಬೈಬಲ್ 1934 |
|