೧ |
ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು. |
೨ |
ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು, |
೩ |
ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು. |
೪ |
ದಳಪತಿ ಜೋಸೆಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದನು. ಜೋಸೆಫನು ಅವರಿಗೆ ಸೇವೆಮಾಡಬೇಕಾಗಿತ್ತು. |
೫ |
ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು. |
೬ |
ಬೆಳಿಗ್ಗೆ ಜೋಸೆಫನು ಅವರ ಬಳಿಗೆ ಬಂದಾಗ ಚಿಂತಾಕ್ರಾಂತರಾಗಿರುವುದು ಕಾಣಿಸಿತು. |
೭ |
ಅದನ್ನು ಗಮನಿಸಿದ ಜೋಸೆಫನು, “ಈ ದಿನ ನಿಮ್ಮ ಮುಖ ಕಳೆಗುಂದಿದೆ ಏಕೆ?” ಎಂದು ತನ್ನೊಂದಿಗೆ ಸೆರೆಯಲ್ಲಿದ್ದ ಆ ನೌಕರರನ್ನು ಕೇಳಿದ. |
೮ |
ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ. |
೯ |
ಆಗ ಆ ಮುಖ್ಯ ಪಾನಸೇವಕ ಜೋಸೆಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆ ನನ್ನೆದುರಿಗೆ ಇರುವುದನ್ನು ಕಂಡೆ. |
೧೦ |
ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂಗಳನ್ನು ಬಿಟ್ಟಿತು. ಆ ಹೂಗಳು ಗೊಂಚಲುಗಳಾಗಿ ಹಣ್ಣಾದವು. |
೧೧ |
ಫರೋಹನ ಪಾನಪಾತ್ರೆ ನನ್ನ ಕೈಯಲ್ಲಿತ್ತು. ನಾನು ಆ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆ,” ಎಂದು ಹೇಳಿದ. |
೧೨ |
ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು; |
೧೩ |
ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ. |
೧೪ |
ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು. |
೧೫ |
ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು. |
೧೬ |
ಜೋಸೆಫನು ಹೇಳಿದ ಅರ್ಥ ಶುಭಕರ ಆದುದೆಂದು ತಿಳಿದ ಆ ಮುಖ್ಯ ಅಡಿಗೆಭಟ್ಟ ಅವನಿಗೆ, “ನಾನು ಕಂಡ ಕನಸನ್ನು ಹೇಳುತ್ತೇನೆ, ಕೇಳು: ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲೆ ಇದ್ದವು. |
೧೭ |
ಮೇಲಣ ಪುಟ್ಟಿಯಲ್ಲಿ ಫರೋಹನಿಗಾಗಿಯೆ ವಿಧವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯಿಂದಲೆ ತಿನ್ನುತ್ತಿದ್ದವು,” ಎಂದು ಹೇಳಿದ. |
೧೮ |
ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು. |
೧೯ |
ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು. |
೨೦ |
ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ. |
೨೧ |
ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ. |
೨೨ |
ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು. |
೨೩ |
ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.
|
Kannada Bible (KNCL) 2016 |
No Data |