೧ |
ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು. |
೨ |
ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು. |
೩ |
ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. |
೪ |
ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು. |
೫ |
ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು. |
೬ |
ಸೇತನು 105 ವರ್ಷದವನಾದಾಗ ಎನೋಷನನ್ನು ಪಡೆದನು. |
೭ |
ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು. |
೮ |
ಸತ್ತಾಗ ಅವನಿಗೆ 912 ವರ್ಷಗಳಾಗಿದ್ದವು. |
೯ |
ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು. |
೧೦ |
ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು. |
೧೧ |
ಸತ್ತಾಗ ಅವನಿಗೆ ಒಟ್ಟು 905 ವರ್ಷಗಳಾಗಿದ್ದವು. |
೧೨ |
ಕೇನಾನನು 70 ವರ್ಷದವನಾದಾಗ ಮಹಲಲೇಲನನ್ನು ಪಡೆದನು. |
೧೩ |
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. |
೧೪ |
ಸತ್ತಾಗ ಅವನಿಗೆ ಒಟ್ಟು 910 ವರ್ಷಗಳಾಗಿದ್ದವು. |
೧೫ |
ಮಹಲಲೇಲನು 65 ವರ್ಷದವನಾದಾಗ ಯೆರೆದನನ್ನು ಪಡೆದನು. |
೧೬ |
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. |
೧೭ |
ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು. |
೧೮ |
ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು. |
೧೯ |
ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಬದುಕಿದನು. |
೨೦ |
ಸತ್ತಾಗ ಅವನಿಗೆ ಒಟ್ಟು 962 ವರ್ಷಗಳಾಗಿದ್ದವು. |
೨೧ |
ಹನೋಕನು 65 ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು. |
೨೨ |
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. |
೨೩ |
ಅವನು ಬದುಕಿದ ಕಾಲವೆಲ್ಲ 365 ವರ್ಷಗಳು. |
೨೪ |
ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು. |
೨೫ |
ಮೆತೂಷೆಲಹನು 187 ವರ್ಷದವನಾದಾಗ ಲೆಮೆಕನನ್ನು ಪಡೆದನು. |
೨೬ |
ಲೆಮೆಕನು ಹುಟ್ಟಿದ ಮೇಲೆ 782 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. |
೨೭ |
ಸತ್ತಾಗ ಅವನಿಗೆ ಒಟ್ಟು 969 ವರ್ಷಗಳಾಗಿದ್ದವು. |
೨೮ |
ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. |
೨೯ |
ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು. |
೩೦ |
ನೋಹನು ಹುಟ್ಟಿದ ಮೇಲೆ ಲೆಮೆಕನು 595 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. |
೩೧ |
ಸತ್ತಾಗ ಅವನಿಗೆ ಒಟ್ಟು 777 ವರ್ಷಗಳಾಗಿದ್ದವು. |
೩೨ |
ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
|
Kannada Bible (KNCL) 2016 |
No Data |