೧ |
ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು. |
೨ |
ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು. |
೩ |
ಭೂಮಿಯ ಮೇಲಿದ್ದ ನೀರು ಸ್ವಲ್ಪ ಸ್ವಲ್ಪವಾಗಿ ತಗ್ಗುತ್ತಾ ನೂರೈವತ್ತು ದಿನಗಳಾದ ಮೇಲೆ ಕಡಿಮೆಯಾಯಿತು. |
೪ |
ಏಳನೆಯ ತಿಂಗಳಿನ ಹದಿನೇಳನೆಯ ದಿನ ನಾವೆಯು ಅರಾರಾಟ್ ನಾಡಿನ ಬೆಟ್ಟದ ಸಾಲಿನಲ್ಲಿ ನಿಂತಿತು. |
೫ |
ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು. |
೬ |
ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. |
೭ |
ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು. |
೮ |
ನೀರು ಇಳಿಯಿತೋ ಇಲ್ಲವೋ ಎಂದು ತಿಳಿದುಕೊಳ್ಳಲು ನೋಹನು ಅನಂತರ ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. |
೯ |
ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು. |
೧೦ |
ಇನ್ನೂ ಏಳು ದಿವಸ ಕಾದು, ಪಾರಿವಾಳವನ್ನು ಹೊರಕ್ಕೆಬಿಟ್ಟನು. |
೧೧ |
ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು. |
೧೨ |
ಮತ್ತೆ ಏಳುದಿನಗಳಾದ ಮೇಲೆ ಇನ್ನೊಮ್ಮೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಈ ಸಾರಿ ಅದು ಹಿಂತಿರುಗಿ ಬರಲೇ ಇಲ್ಲ. |
೧೩ |
ನೋಹನ 601 ನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಿದನು. ಇಗೋ, ಭೂಮಿಯ ತೇವ ಆರುತ್ತಿತ್ತು. |
೧೪ |
ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಂದು ನೆಲವು ಪೂರ್ತಿಯಾಗಿ ಒಣಗಿತ್ತು. |
೧೫ |
ಆಗ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ಮಕ್ಕಳು ಮತ್ತು ಅವರ ಮಡದಿಯರು ನಾವೆಯನ್ನು ಬಿಟ್ಟು ಹೊರಗೆ ಬನ್ನಿ. |
೧೬ |
*** |
೧೭ |
ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು. |
೧೮ |
ಅಂತೆಯೇ ನೋಹನು, ಮಡದಿ, ಮಕ್ಕಳು, ಸೊಸೆಯರ ಸಮೇತ ಹೊರಗೆ ಬಂದನು. |
೧೯ |
ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು. |
೨೦ |
ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು. |
೨೧ |
ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ. |
೨೨ |
ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”
|
Kannada Bible (KNCL) 2016 |
No Data |