A A A A A
×

ಕನ್ನಡ ಬೈಬಲ್ (KNCL) 2016

ಸಮುವೇಲನು ೨ ೧೦

ಇದಾದನಂತರ ಅಮ್ಮೋನಿಯರ ಅರಸನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.
ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.
ಅಲ್ಲಿನ ನಾಯಕರು ತಮ್ಮ ಒಡೆಯ ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆಂದು ತಿಳಿಯುತ್ತೀರೋ? ಇಲ್ಲವೇ ಇಲ್ಲ. ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ,” ಎಂದು ಹೇಳಿದರು.
ಆದುದರಿಂದ ಹಾನೂನನು ದಾವೀದನ ಸೇವಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.
ಆವರು ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನ ಹೊಂದಿದ ಅವರಿಗೆ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.
ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.
ಈ ಸುದ್ದಿ ದಾವೀದನಿಗೆ ಮುಟ್ಟಿತು.ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ವಿರುದ್ಧ ನಿಲ್ಲಿಸಿದನು.
೧೦
ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,
೧೧
“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.
೧೨
ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
೧೩
ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.
೧೪
ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.
೧೫
ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.
೧೬
ಹದದೆಜೆರನು ಯೂಫ್ರಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಬರಮಾಡಿದನು; ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
೧೭
ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿ ದಾಟಿ ಹೇಲಾಮಿಗೆ ಬಂದನು. ಸಿರಿಯಾದವರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತರು.
೧೮
ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
೧೯
ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ.
ಸಮುವೇಲನು ೨ ೧೦:1
ಸಮುವೇಲನು ೨ ೧೦:2
ಸಮುವೇಲನು ೨ ೧೦:3
ಸಮುವೇಲನು ೨ ೧೦:4
ಸಮುವೇಲನು ೨ ೧೦:5
ಸಮುವೇಲನು ೨ ೧೦:6
ಸಮುವೇಲನು ೨ ೧೦:7
ಸಮುವೇಲನು ೨ ೧೦:8
ಸಮುವೇಲನು ೨ ೧೦:9
ಸಮುವೇಲನು ೨ ೧೦:10
ಸಮುವೇಲನು ೨ ೧೦:11
ಸಮುವೇಲನು ೨ ೧೦:12
ಸಮುವೇಲನು ೨ ೧೦:13
ಸಮುವೇಲನು ೨ ೧೦:14
ಸಮುವೇಲನು ೨ ೧೦:15
ಸಮುವೇಲನು ೨ ೧೦:16
ಸಮುವೇಲನು ೨ ೧೦:17
ಸಮುವೇಲನು ೨ ೧೦:18
ಸಮುವೇಲನು ೨ ೧೦:19
ಸಮುವೇಲನು ೨ 1 / ಸಮು೨ 1
ಸಮುವೇಲನು ೨ 2 / ಸಮು೨ 2
ಸಮುವೇಲನು ೨ 3 / ಸಮು೨ 3
ಸಮುವೇಲನು ೨ 4 / ಸಮು೨ 4
ಸಮುವೇಲನು ೨ 5 / ಸಮು೨ 5
ಸಮುವೇಲನು ೨ 6 / ಸಮು೨ 6
ಸಮುವೇಲನು ೨ 7 / ಸಮು೨ 7
ಸಮುವೇಲನು ೨ 8 / ಸಮು೨ 8
ಸಮುವೇಲನು ೨ 9 / ಸಮು೨ 9
ಸಮುವೇಲನು ೨ 10 / ಸಮು೨ 10
ಸಮುವೇಲನು ೨ 11 / ಸಮು೨ 11
ಸಮುವೇಲನು ೨ 12 / ಸಮು೨ 12
ಸಮುವೇಲನು ೨ 13 / ಸಮು೨ 13
ಸಮುವೇಲನು ೨ 14 / ಸಮು೨ 14
ಸಮುವೇಲನು ೨ 15 / ಸಮು೨ 15
ಸಮುವೇಲನು ೨ 16 / ಸಮು೨ 16
ಸಮುವೇಲನು ೨ 17 / ಸಮು೨ 17
ಸಮುವೇಲನು ೨ 18 / ಸಮು೨ 18
ಸಮುವೇಲನು ೨ 19 / ಸಮು೨ 19
ಸಮುವೇಲನು ೨ 20 / ಸಮು೨ 20
ಸಮುವೇಲನು ೨ 21 / ಸಮು೨ 21
ಸಮುವೇಲನು ೨ 22 / ಸಮು೨ 22
ಸಮುವೇಲನು ೨ 23 / ಸಮು೨ 23
ಸಮುವೇಲನು ೨ 24 / ಸಮು೨ 24