A A A A A
×

ಕನ್ನಡ ಬೈಬಲ್ (KNCL) 2016

ಅರಸುಗಳು ೧ ೧೦

ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.
ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಲಿಷ್ಟವಾದ ಒಗಟು ಒಂದೂ ಇರಲಿಲ್ಲ.
ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು;
ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,
“ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.
ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!
ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.
೧೦
ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.
೧೧
ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.
೧೨
ಅರಸನು ಸುಗಂಧದ ಮರದಿಂದ ದೇವಾಲಯಕ್ಕೆ ಹಾಗು ಅರಮನೆಗಳಿಗೆ ಮೆಟ್ಟಲುಗಳನ್ನು ವಾದ್ಯಗಾರರಿಗಾಗಿ ಕಿನ್ನರಿಗಳನ್ನು ಹಾಗು ಸ್ವರಮಂಡಲಗಳನ್ನು ಮಾಡಿಸಿದನು. ಆಗ ಬಂದಷ್ಟು ಸುಗಂಧದಮರ ಇಂದಿನವರೆಗೂ ಬರಲಿಲ್ಲ, ಮತ್ತು ಯಾರೂ ಅಷ್ಟನ್ನು ಕಾಣಲೇ ಇಲ್ಲ.
೧೩
ಅರಸ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ, ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
೧೪
ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯದ ಅರಸರು ಹಾಗು ಪ್ರದೇಶಾಧಿಪತಿಗಳು ತರುತ್ತಿದ್ದ ಬಂಗಾರವಲ್ಲದೆ
೧೫
ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.
೧೬
ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.
೧೭
ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನೂ ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
೧೮
ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;
೧೯
ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.
೨೦
ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
೨೧
ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
೨೨
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.
೨೩
ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿ ಇದ್ದನು.
೨೪
ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.
೨೫
ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
೨೬
ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.
೨೭
ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.
೨೮
ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು; ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.
೨೯
ಈಜಿಪ್ಟ್ ದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳನ್ನೂ ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರಿಗೆ ಇವರ ಮುಖಾಂತರವೇ ಮಾರಾಟವಾಗುತ್ತಿದ್ದವು.
ಅರಸುಗಳು ೧ ೧೦:1
ಅರಸುಗಳು ೧ ೧೦:2
ಅರಸುಗಳು ೧ ೧೦:3
ಅರಸುಗಳು ೧ ೧೦:4
ಅರಸುಗಳು ೧ ೧೦:5
ಅರಸುಗಳು ೧ ೧೦:6
ಅರಸುಗಳು ೧ ೧೦:7
ಅರಸುಗಳು ೧ ೧೦:8
ಅರಸುಗಳು ೧ ೧೦:9
ಅರಸುಗಳು ೧ ೧೦:10
ಅರಸುಗಳು ೧ ೧೦:11
ಅರಸುಗಳು ೧ ೧೦:12
ಅರಸುಗಳು ೧ ೧೦:13
ಅರಸುಗಳು ೧ ೧೦:14
ಅರಸುಗಳು ೧ ೧೦:15
ಅರಸುಗಳು ೧ ೧೦:16
ಅರಸುಗಳು ೧ ೧೦:17
ಅರಸುಗಳು ೧ ೧೦:18
ಅರಸುಗಳು ೧ ೧೦:19
ಅರಸುಗಳು ೧ ೧೦:20
ಅರಸುಗಳು ೧ ೧೦:21
ಅರಸುಗಳು ೧ ೧೦:22
ಅರಸುಗಳು ೧ ೧೦:23
ಅರಸುಗಳು ೧ ೧೦:24
ಅರಸುಗಳು ೧ ೧೦:25
ಅರಸುಗಳು ೧ ೧೦:26
ಅರಸುಗಳು ೧ ೧೦:27
ಅರಸುಗಳು ೧ ೧೦:28
ಅರಸುಗಳು ೧ ೧೦:29
ಅರಸುಗಳು ೧ 1 / ಅರ೧ 1
ಅರಸುಗಳು ೧ 2 / ಅರ೧ 2
ಅರಸುಗಳು ೧ 3 / ಅರ೧ 3
ಅರಸುಗಳು ೧ 4 / ಅರ೧ 4
ಅರಸುಗಳು ೧ 5 / ಅರ೧ 5
ಅರಸುಗಳು ೧ 6 / ಅರ೧ 6
ಅರಸುಗಳು ೧ 7 / ಅರ೧ 7
ಅರಸುಗಳು ೧ 8 / ಅರ೧ 8
ಅರಸುಗಳು ೧ 9 / ಅರ೧ 9
ಅರಸುಗಳು ೧ 10 / ಅರ೧ 10
ಅರಸುಗಳು ೧ 11 / ಅರ೧ 11
ಅರಸುಗಳು ೧ 12 / ಅರ೧ 12
ಅರಸುಗಳು ೧ 13 / ಅರ೧ 13
ಅರಸುಗಳು ೧ 14 / ಅರ೧ 14
ಅರಸುಗಳು ೧ 15 / ಅರ೧ 15
ಅರಸುಗಳು ೧ 16 / ಅರ೧ 16
ಅರಸುಗಳು ೧ 17 / ಅರ೧ 17
ಅರಸುಗಳು ೧ 18 / ಅರ೧ 18
ಅರಸುಗಳು ೧ 19 / ಅರ೧ 19
ಅರಸುಗಳು ೧ 20 / ಅರ೧ 20
ಅರಸುಗಳು ೧ 21 / ಅರ೧ 21
ಅರಸುಗಳು ೧ 22 / ಅರ೧ 22