A A A A A
×

ಕನ್ನಡ ಬೈಬಲ್ (KNCL) 2016

ಅರಸುಗಳು ೧ ೩

ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.
ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.
ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.
ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,
ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.
ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.
ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.
ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.
ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.
೧೦
ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು.
೧೧
ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.
೧೨
ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
೧೩
ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.
೧೪
ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.
೧೫
ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.
೧೬
ಒಂದು ದಿನ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
೧೭
ಅವರಲ್ಲಿ ಒಬ್ಬಳು ಅರಸನಿಗೆ, “ಒಡೆಯಾ, ಕೇಳಿ; ನಾನೂ ಇವಳೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಒಂದು ಮಗವನ್ನು ಹೆತ್ತೆ.
೧೮
ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು; ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ.
೧೯
ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.
೨೦
ಮಧ್ಯರಾತ್ರಿಯಲ್ಲಿ ಇವಳೆದ್ದು, ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ, ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿ ಇಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.
೨೧
ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು.
೨೨
ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗ; ಸತ್ತಿರುವವನು ನಿನ್ನ ಮಗ,” ಎಂದು ನುಡಿದಳು. ಮೊದಲನೆಯವಳು ಮತ್ತೆ, “ಇಲ್ಲ ಸತ್ತಿರುವವನು ನಿನ್ನ ಮಗ ಬದುಕಿರುವವನು ನನ್ನ ಮಗ,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.
೨೩
ಆಗ ಅರಸನು, “ಜೀವದಿಂದಿರುವ ಕೂಸು ನನ್ನದು, ಸತ್ತಿರುವುದು ನಿನ್ನದು,’ ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು, ‘ಇಲ್ಲ, ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು,’ ಎನ್ನುತ್ತಾಳೆ.
೨೪
ನನಗೊಂದು ಕತ್ತಿಯನ್ನು ತಂದುಕೊಡಿ,” ಎಂದು ಸೇವಕರಿಗೆ ಹೇಳಿದನು.
೨೫
ಅವರು ತಂದರು. ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು, ಎರಡು ಭಾಗಮಾಡಿ, ಅರ್ಧವನ್ನು ಅವಳಿಗೂ ಅರ್ಧವನ್ನು ಇವಳಿಗೂ ಕೊಡಿ,” ಎಂದು ಅಪ್ಪಣೆಮಾಡಿದನು.
೨೬
ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.
೨೭
ಕೂಡಲೆ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿ, ಅದನ್ನು ಆ ಸ್ತ್ರೀಗೆ ಕೊಡಿ; ಅವಳೇ ಅದರ ತಾಯಿ,” ಎಂದು ಆಜ್ಞಾಪಿಸಿದನು.
೨೮
ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.
ಅರಸುಗಳು ೧ ೩:1
ಅರಸುಗಳು ೧ ೩:2
ಅರಸುಗಳು ೧ ೩:3
ಅರಸುಗಳು ೧ ೩:4
ಅರಸುಗಳು ೧ ೩:5
ಅರಸುಗಳು ೧ ೩:6
ಅರಸುಗಳು ೧ ೩:7
ಅರಸುಗಳು ೧ ೩:8
ಅರಸುಗಳು ೧ ೩:9
ಅರಸುಗಳು ೧ ೩:10
ಅರಸುಗಳು ೧ ೩:11
ಅರಸುಗಳು ೧ ೩:12
ಅರಸುಗಳು ೧ ೩:13
ಅರಸುಗಳು ೧ ೩:14
ಅರಸುಗಳು ೧ ೩:15
ಅರಸುಗಳು ೧ ೩:16
ಅರಸುಗಳು ೧ ೩:17
ಅರಸುಗಳು ೧ ೩:18
ಅರಸುಗಳು ೧ ೩:19
ಅರಸುಗಳು ೧ ೩:20
ಅರಸುಗಳು ೧ ೩:21
ಅರಸುಗಳು ೧ ೩:22
ಅರಸುಗಳು ೧ ೩:23
ಅರಸುಗಳು ೧ ೩:24
ಅರಸುಗಳು ೧ ೩:25
ಅರಸುಗಳು ೧ ೩:26
ಅರಸುಗಳು ೧ ೩:27
ಅರಸುಗಳು ೧ ೩:28
ಅರಸುಗಳು ೧ 1 / ಅರ೧ 1
ಅರಸುಗಳು ೧ 2 / ಅರ೧ 2
ಅರಸುಗಳು ೧ 3 / ಅರ೧ 3
ಅರಸುಗಳು ೧ 4 / ಅರ೧ 4
ಅರಸುಗಳು ೧ 5 / ಅರ೧ 5
ಅರಸುಗಳು ೧ 6 / ಅರ೧ 6
ಅರಸುಗಳು ೧ 7 / ಅರ೧ 7
ಅರಸುಗಳು ೧ 8 / ಅರ೧ 8
ಅರಸುಗಳು ೧ 9 / ಅರ೧ 9
ಅರಸುಗಳು ೧ 10 / ಅರ೧ 10
ಅರಸುಗಳು ೧ 11 / ಅರ೧ 11
ಅರಸುಗಳು ೧ 12 / ಅರ೧ 12
ಅರಸುಗಳು ೧ 13 / ಅರ೧ 13
ಅರಸುಗಳು ೧ 14 / ಅರ೧ 14
ಅರಸುಗಳು ೧ 15 / ಅರ೧ 15
ಅರಸುಗಳು ೧ 16 / ಅರ೧ 16
ಅರಸುಗಳು ೧ 17 / ಅರ೧ 17
ಅರಸುಗಳು ೧ 18 / ಅರ೧ 18
ಅರಸುಗಳು ೧ 19 / ಅರ೧ 19
ಅರಸುಗಳು ೧ 20 / ಅರ೧ 20
ಅರಸುಗಳು ೧ 21 / ಅರ೧ 21
ಅರಸುಗಳು ೧ 22 / ಅರ೧ 22