A A A A A
×

ಕನ್ನಡ ಬೈಬಲ್ (KNCL) 2016

ಅರಸುಗಳು ೧ ೯

ಸೊಲೊಮೋನನು ಸರ್ವೇಶ್ವರನ ಆಲಯವನ್ನು, ತನ್ನ ಅರಮನೆಯನ್ನು ಹಾಗು ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಮುಗಿಸಿದನು.
ಅನಂತರ ಸರ್ವೇಶ್ವರ, ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.
ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.
ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;
ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,
ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.
ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.
ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.
೧೦
ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.
೧೧
ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
೧೨
ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.
೧೩
ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಇದೆಂಥ ಪಟ್ಟಣಗಳನ್ನು ಕೊಟ್ಟಿರುವೆ!” ಎಂದು ಹೇಳಿ ಅವುಗಳಿಗೆ ‘ಕಾಬೂಲ್ ದೇಶ’ ಎಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
೧೪
ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು.
೧೫
ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.
೧೬
ಈಜಿಪ್ಟಿನ ಅರಸ ಫರೋಹನು, ಗೆಜೆರ್ ಪಟ್ಟಣವನ್ನು ಹಿಡಿದು ಅದನ್ನು ವಶಮಾಡಿಕೊಂಡು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಉಡುಗೊರೆಯಾಗಿ ಕೊಟ್ಟಿದ್ದನು.
೧೭
ಗೆಜೆರ್ ಪಟ್ಟಣವನ್ನು ಬಿಟ್ಟು ಕೆಳಗಿನ ಬೇತ್-ಹೋರೋನ್,
೧೮
ಬಾಲಾತ್, ಮರುಭೂಮಿಯಲ್ಲಿ ಇರುವ ತಾಮರ್,
೧೯
ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.
೨೦
ಇಸ್ರಯೇಲರು ಸಂಹರಿಸದೆ ಉಳಿಸಿದ ಅನ್ಯಜನರನ್ನೂ ಕಾನಾನ್ ದೇಶದಲ್ಲಿ ಉಳಿದಿದ್ದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವೀಯ,
೨೧
ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.
೨೨
ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.
೨೩
ಇದಲ್ಲದೆ, ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಯೇಲರನ್ನು ಅಧಿಕಾರಿಗಳನ್ನಾಗಿ ನೇಮಿಸಿದನು.
೨೪
ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು.
೨೫
ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.
೨೬
ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.
೨೭
ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
೨೮
ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.
ಅರಸುಗಳು ೧ ೯:1
ಅರಸುಗಳು ೧ ೯:2
ಅರಸುಗಳು ೧ ೯:3
ಅರಸುಗಳು ೧ ೯:4
ಅರಸುಗಳು ೧ ೯:5
ಅರಸುಗಳು ೧ ೯:6
ಅರಸುಗಳು ೧ ೯:7
ಅರಸುಗಳು ೧ ೯:8
ಅರಸುಗಳು ೧ ೯:9
ಅರಸುಗಳು ೧ ೯:10
ಅರಸುಗಳು ೧ ೯:11
ಅರಸುಗಳು ೧ ೯:12
ಅರಸುಗಳು ೧ ೯:13
ಅರಸುಗಳು ೧ ೯:14
ಅರಸುಗಳು ೧ ೯:15
ಅರಸುಗಳು ೧ ೯:16
ಅರಸುಗಳು ೧ ೯:17
ಅರಸುಗಳು ೧ ೯:18
ಅರಸುಗಳು ೧ ೯:19
ಅರಸುಗಳು ೧ ೯:20
ಅರಸುಗಳು ೧ ೯:21
ಅರಸುಗಳು ೧ ೯:22
ಅರಸುಗಳು ೧ ೯:23
ಅರಸುಗಳು ೧ ೯:24
ಅರಸುಗಳು ೧ ೯:25
ಅರಸುಗಳು ೧ ೯:26
ಅರಸುಗಳು ೧ ೯:27
ಅರಸುಗಳು ೧ ೯:28
ಅರಸುಗಳು ೧ 1 / ಅರ೧ 1
ಅರಸುಗಳು ೧ 2 / ಅರ೧ 2
ಅರಸುಗಳು ೧ 3 / ಅರ೧ 3
ಅರಸುಗಳು ೧ 4 / ಅರ೧ 4
ಅರಸುಗಳು ೧ 5 / ಅರ೧ 5
ಅರಸುಗಳು ೧ 6 / ಅರ೧ 6
ಅರಸುಗಳು ೧ 7 / ಅರ೧ 7
ಅರಸುಗಳು ೧ 8 / ಅರ೧ 8
ಅರಸುಗಳು ೧ 9 / ಅರ೧ 9
ಅರಸುಗಳು ೧ 10 / ಅರ೧ 10
ಅರಸುಗಳು ೧ 11 / ಅರ೧ 11
ಅರಸುಗಳು ೧ 12 / ಅರ೧ 12
ಅರಸುಗಳು ೧ 13 / ಅರ೧ 13
ಅರಸುಗಳು ೧ 14 / ಅರ೧ 14
ಅರಸುಗಳು ೧ 15 / ಅರ೧ 15
ಅರಸುಗಳು ೧ 16 / ಅರ೧ 16
ಅರಸುಗಳು ೧ 17 / ಅರ೧ 17
ಅರಸುಗಳು ೧ 18 / ಅರ೧ 18
ಅರಸುಗಳು ೧ 19 / ಅರ೧ 19
ಅರಸುಗಳು ೧ 20 / ಅರ೧ 20
ಅರಸುಗಳು ೧ 21 / ಅರ೧ 21
ಅರಸುಗಳು ೧ 22 / ಅರ೧ 22