೧ |
ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ: |
೨ |
ಆಸಾಫ್ಯರಲ್ಲಿ ಜಕ್ಕೂರ್, ಜೋಸೆಫ್, ನೆತನ್ಯ, ಅಶರೇಲ ಎಂಬವರು. ಇವರು ಆಸ್ಥಾನದ ಗಾಯಕ ಆಸಾಫನ ಸಹಾಯಕರು. |
೩ |
ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು. |
೪ |
ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್, |
೫ |
ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು. |
೬ |
ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು. |
೭ |
ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು. |
೮ |
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು: |
೯ |
ಮೊದಲನೆಯವನು ಆಸಾಫ್ಯನಾದ ಜೋಸೆಫನು; ಎರಡನೆಯವನು ಗೆದಲ್ಯ |
೧೦ |
ಮೂರನೆಯವನು ಜಕ್ಕೂರ್ |
೧೧ |
ನಾಲ್ಕನೆಯವನು ಇಚ್ರೀ |
೧೨ |
ಐದನೆಯವನು ನೆತನ್ಯ |
೧೩ |
ಆರನೆಯವನು ಬುಕ್ಕೀಯ |
೧೪ |
ಏಳನೆಯವನು ಯೆಸರೇಲ |
೧೫ |
ಎಂಟನೆಯವನು ಯೆಶಾಯ |
೧೬ |
ಒಂಬತ್ತನೆಯವನು ಮತ್ತನ್ಯ |
೧೭ |
ಹತ್ತನೆಯವನು ಶಿಮ್ಮೀ |
೧೮ |
ಹನ್ನೊಂದನೆಯವನು ಅಜರೇಲ್ |
೧೯ |
ಹನ್ನೆರಡನೆಯವನು ಹಷಬ್ಯ |
೨೦ |
ಹದಿಮೂರನೆಯವನು ಶೂಬಾಯೇಲ್ |
೨೧ |
ಹದಿನಾಲ್ಕನೆಯವನು ಮತ್ತಿತ್ಯ |
೨೨ |
ಹದಿನೈದನೆಯವನು ಯೆರೆಮೋತ್ |
೨೩ |
ಹದಿನಾರನೆಯವನು ಹನನ್ಯ |
೨೪ |
ಹದಿನೇಳನೆಯವನು ಯೊಷ್ಬೆಕಾಷ |
೨೫ |
ಹದಿನೆಂಟನೆಯವನು ಹನಾನೀ |
೨೬ |
ಹತ್ತೊಂಬತ್ತನೆಯವನು ಮಲ್ಲೋತಿ |
೨೭ |
ಇಪ್ಪತ್ತನೆಯವನು ಎಲೀಯಾತ |
೨೮ |
ಇಪ್ಪತ್ತೊಂದನೆಯವನು ಹೋತೀರ್ |
೨೯ |
ಇಪ್ಪತ್ತೆರಡನೆಯವನು ಗಿದ್ದಲ್ತಿ |
೩೦ |
ಇಪ್ಪತ್ತಮೂರನೆಯವನು ಮಹಜೀಯೋತ್ |
೩೧ |
ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್.
|
Kannada Bible (KNCL) 2016 |
No Data |