A A A A A
×

ಕನ್ನಡ ಬೈಬಲ್ (KNCL) 2016

ಕ್ರಾನಿಕಲ್ಸ್ ೧ ೨೮

1
ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.
2
ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.
3
ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.
4
“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.
5
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.
6
‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು.
7
ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ.
8
“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.
9
“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.
10
ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.
11
ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,
12
ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.
13
ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ,
14
ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು.
15
ಇದಲ್ಲದೆ, ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗಿಸಬೇಕಾದ ಎಲ್ಲ ಸಾಮಾನುಗಳ ಬೆಳ್ಳಿ, ಬಂಗಾರದ ತೂಕ ಅಂದರೆ, ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,
16
ಮೀಸಲು ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,
17
ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,
18
ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.
19
ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.
20
ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.
21
ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.
ಕ್ರಾನಿಕಲ್ಸ್ ೧ ೨೮:1
ಕ್ರಾನಿಕಲ್ಸ್ ೧ ೨೮:2
ಕ್ರಾನಿಕಲ್ಸ್ ೧ ೨೮:3
ಕ್ರಾನಿಕಲ್ಸ್ ೧ ೨೮:4
ಕ್ರಾನಿಕಲ್ಸ್ ೧ ೨೮:5
ಕ್ರಾನಿಕಲ್ಸ್ ೧ ೨೮:6
ಕ್ರಾನಿಕಲ್ಸ್ ೧ ೨೮:7
ಕ್ರಾನಿಕಲ್ಸ್ ೧ ೨೮:8
ಕ್ರಾನಿಕಲ್ಸ್ ೧ ೨೮:9
ಕ್ರಾನಿಕಲ್ಸ್ ೧ ೨೮:10
ಕ್ರಾನಿಕಲ್ಸ್ ೧ ೨೮:11
ಕ್ರಾನಿಕಲ್ಸ್ ೧ ೨೮:12
ಕ್ರಾನಿಕಲ್ಸ್ ೧ ೨೮:13
ಕ್ರಾನಿಕಲ್ಸ್ ೧ ೨೮:14
ಕ್ರಾನಿಕಲ್ಸ್ ೧ ೨೮:15
ಕ್ರಾನಿಕಲ್ಸ್ ೧ ೨೮:16
ಕ್ರಾನಿಕಲ್ಸ್ ೧ ೨೮:17
ಕ್ರಾನಿಕಲ್ಸ್ ೧ ೨೮:18
ಕ್ರಾನಿಕಲ್ಸ್ ೧ ೨೮:19
ಕ್ರಾನಿಕಲ್ಸ್ ೧ ೨೮:20
ಕ್ರಾನಿಕಲ್ಸ್ ೧ ೨೮:21
ಕ್ರಾನಿಕಲ್ಸ್ ೧ 1 / 1Taw 1
ಕ್ರಾನಿಕಲ್ಸ್ ೧ 2 / 1Taw 2
ಕ್ರಾನಿಕಲ್ಸ್ ೧ 3 / 1Taw 3
ಕ್ರಾನಿಕಲ್ಸ್ ೧ 4 / 1Taw 4
ಕ್ರಾನಿಕಲ್ಸ್ ೧ 5 / 1Taw 5
ಕ್ರಾನಿಕಲ್ಸ್ ೧ 6 / 1Taw 6
ಕ್ರಾನಿಕಲ್ಸ್ ೧ 7 / 1Taw 7
ಕ್ರಾನಿಕಲ್ಸ್ ೧ 8 / 1Taw 8
ಕ್ರಾನಿಕಲ್ಸ್ ೧ 9 / 1Taw 9
ಕ್ರಾನಿಕಲ್ಸ್ ೧ 10 / 1Taw 10
ಕ್ರಾನಿಕಲ್ಸ್ ೧ 11 / 1Taw 11
ಕ್ರಾನಿಕಲ್ಸ್ ೧ 12 / 1Taw 12
ಕ್ರಾನಿಕಲ್ಸ್ ೧ 13 / 1Taw 13
ಕ್ರಾನಿಕಲ್ಸ್ ೧ 14 / 1Taw 14
ಕ್ರಾನಿಕಲ್ಸ್ ೧ 15 / 1Taw 15
ಕ್ರಾನಿಕಲ್ಸ್ ೧ 16 / 1Taw 16
ಕ್ರಾನಿಕಲ್ಸ್ ೧ 17 / 1Taw 17
ಕ್ರಾನಿಕಲ್ಸ್ ೧ 18 / 1Taw 18
ಕ್ರಾನಿಕಲ್ಸ್ ೧ 19 / 1Taw 19
ಕ್ರಾನಿಕಲ್ಸ್ ೧ 20 / 1Taw 20
ಕ್ರಾನಿಕಲ್ಸ್ ೧ 21 / 1Taw 21
ಕ್ರಾನಿಕಲ್ಸ್ ೧ 22 / 1Taw 22
ಕ್ರಾನಿಕಲ್ಸ್ ೧ 23 / 1Taw 23
ಕ್ರಾನಿಕಲ್ಸ್ ೧ 24 / 1Taw 24
ಕ್ರಾನಿಕಲ್ಸ್ ೧ 25 / 1Taw 25
ಕ್ರಾನಿಕಲ್ಸ್ ೧ 26 / 1Taw 26
ಕ್ರಾನಿಕಲ್ಸ್ ೧ 27 / 1Taw 27
ಕ್ರಾನಿಕಲ್ಸ್ ೧ 28 / 1Taw 28
ಕ್ರಾನಿಕಲ್ಸ್ ೧ 29 / 1Taw 29