೧ |
ಆಗ ಯೋಬನು ಮತ್ತೆ ಹೀಗೆಂದನು: |
೨ |
“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನು ನಸುಕುತ್ತಿರುವಿರಿ? |
೩ |
ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ? |
೪ |
ನಿಶ್ಚಯವಾಗಿ ನಾನು ತಪ್ಪುಳ್ಳವನಾದರೆ ಅದರಿಂದ ನಿಮಗೇನು? ಆ ತಪ್ಪು ನನ್ನದೆ. |
೫ |
ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ? |
೬ |
ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ: |
೭ |
‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ. |
೮ |
ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ. |
೯ |
ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ. |
೧೦ |
ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ. |
೧೧ |
ತನ್ನ ಕೋಪಾಗ್ನಿಯನು ನನ್ನ ಮೇಲೆ ಧಗಧಗಿಸಿದ್ದಾನೆ ನನ್ನನ್ನು ತನ್ನ ವೈರಿಯೆಂದೇ ಪರಿಗಣಿಸಿದ್ದಾನೆ. |
೧೨ |
ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ. |
೧೩ |
ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ. |
೧೪ |
ನನ್ನನು ಬಂಧುಬಳಗದವರು ಕೈಬಿಟ್ಟಿದ್ದಾರೆ ಆಪ್ತಮಿತ್ರರೂ ನನ್ನನು ಮರೆತುಬಿಟ್ಟಿದ್ದಾರೆ. |
೧೫ |
ಮನೆಯ ದಾಸದಾಸಿಯರಿಗೇ ನಾನು ಅನ್ಯನಾದೆ ಅವರ ಕಣ್ಣಿಗೇ ನಾನು ಪರದೇಶಿಯನಾದೆ. |
೧೬ |
ಕರೆದರೂ ನನ್ನ ಸೇವಕರು ಉತ್ತರಕೊಡುವುದಿಲ್ಲ ಬಾಯಿತೆರೆದು ಬೇಡಿಕೊಳ್ಳುವ ಸ್ಥಿತಿ ನನ್ನದಾಯಿತಲ್ಲಾ! |
೧೭ |
ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ. |
೧೮ |
ಚಿಕ್ಕವರು ಕೂಡ ನನ್ನನು ತಿರಸ್ಕರಿಸುತ್ತಾರೆ ನಾನು ಕಾಣಿಸಿಕೊಂಡಾಗಲೆಲ್ಲ ಹಾಸ್ಯಮಾಡುತ್ತಾರೆ. |
೧೯ |
ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ. |
೨೦ |
ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ. |
೨೧ |
ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ. |
೨೨ |
ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ? |
೨೩ |
ನನ್ನ ಮಾತುಗಳನು ಬರೆದಿಟ್ಟರೆ ಎಷ್ಟೋ ಮೇಲು! ಸುರುಳಿಯಲಿ ಅದು ಲಿಖಿತವಾದರೆ ಎಷ್ಟೋ ಲೇಸು! |
೨೪ |
ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು. |
೨೫ |
ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು. |
೨೬ |
ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು. |
೨೭ |
ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು. |
೨೮ |
‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ. |
೨೯ |
ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”
|
Kannada Bible (KNCL) 2016 |
No Data |