೧ |
ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II |
೨ |
ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II |
೩ |
ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II |
೪ |
ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II |
೫ |
ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II |
೬ |
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II
|
Kannada Bible (KNCL) 2016 |
No Data |